Breaking
23 Mar 2026, Mon

ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರಿಗೆ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ

ಮಂಗಳೂರು: ಮಂಗಳೂರು ವಿಮಾನ ದುರಂತ ಸಂಭವಿಸಿ 15 ವರ್ಷಗಳಾಗಿದ್ದು ಈ ದುರಂತದಲ್ಲಿ ಮಡಿದವರಿಗೆ ದ.ಕ. ಜಿಲ್ಲಾಡಳಿತದಿಂದ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.

ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಸ್ಮರಣಾರ್ಥ ತಣ್ಣೀರುಬಾವಿ ಬಳಿಯ ನಿರ್ಮಿಸಲಾಗಿರುವ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಾಟು ಮಾಡಲಾಗಿತ್ತು.

ಈ ಸಂದರ್ಭ ಜಿಪಂ ಸಿಇಒ ಡಾ.ಆನಂದ್, ಮಂಗಳೂರು ಮನಪಾ ಆಯುಕ್ತ ರವಿಚಂದ್ರ ನಾಯಕ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದು ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಘಟನೆ

2010ರ ಮೇ 22ರಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೆ ಈಡಾಗಿತ್ತು.

ಈ ವೇಳೆ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು. 8 ಮಂದಿ ಬದುಕುಳಿದಿದ್ದರು.

ಈ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು.

ಈಗ ಅದೇ ಜಾಗದಲ್ಲಿ ಮೃತರ ನೆನಪಿನ ಪಾರ್ಕ್ ನಿರ್ಮಾಣ ಮಾಡಲಾಗಿದೆ.

Leave a Reply

Your email address will not be published. Required fields are marked *