ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದೂರು ದಾಖಲು ಮಾಡಿದ್ದರು.
ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಟ ಮಡೆನೂರು ಮನು ಅವರು ನಾಯಕ ನಟನಾಗಿ ನಟನೆ ಮಾಡಿದ್ದಾರೆ.ಈ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.
ಇಂತಹ ಹೊತ್ತಲ್ಲೇ ನಟನ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ಕೇಸ್ ದಾಖಲಾಗಿದ್ದಂತೆ ನಟ ತಲೆಮರೆಸಿಕೊಂಡಿದ್ದ.
ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದರು ಇದೀಗ ಪೊಲೀಸರು ಮನುವನ್ನು ಅರೆಸ್ಟ್ ಮಾಡಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.


