ಕಾಸರಗೋಡು: ಸ್ನಾನಕ್ಕೆಂದು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಮೇ 22 ರಂದು ನಡೆದಿದೆ.
ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತರೆಂದು ಗುರುತಿಸಲಾಗಿದೆ.
ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಮಕ್ಕಳು ಸ್ನಾನಕ್ಕೆಂದು ಇಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.


ಸ್ಥಳಕ್ಕೆ ನಾಗರಿಕರು, ಅಗ್ನಿಶಾಮಕ ದಳ ಸಿಬ್ಬಂದಿಗಳು, ಪೊಲೀಸರು ಧಾವಿಸಿ ಮಕ್ಕಳ ರಕ್ಷಣೆಗೆ ಯತ್ನಿಸಿದರೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಮೃತ ಅನ್ವರ್ ನ ಸಹೋದರ ಹಾಶಿಮ್ ಸ್ಥಿತಿ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.



