ಬಂಟ್ವಾಳ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಮೊಹಮ್ಮದ್ ಆಸ್ಕರ್ ಆಲಿ ಎಂದು ಗುರುತಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕ ನಿರ್ಲಕ್ಷ್ಯತನದ ಹಾಗೂ ದುಡುಕತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.


ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿದ್ದಾರೆ. ಕಾರು ಚಾಲಕ ಮೊಹಮ್ಮದ್ ಶಾಫಿ ಮೇಲೆ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮೊಹಮ್ಮದ್ ಆಸ್ಕರ್ ಆಲಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


