Breaking
9 May 2026, Sat

ಬೆಳ್ತಂಗಡಿ: ರಿಕ್ಷಾ-ಪಿಕಪ್ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಮಧ್ಯೆ ಅಪಘಾತ ಸಂಭವಿಸಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22ರಂದು ನಡೆದಿದೆ.

ರಿಕ್ಷಾ ಚಾಲಕ ಮುಂಡಾಜೆ ಗ್ರಾಮದ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *