Breaking
27 Jul 2026, Mon

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದ ಶಾರಾನ್ ಡಿಸೋಜಾ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.

ಈ ಮೊದಲು 625ರಲ್ಲಿ 623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಙಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು 624 ಅಂಕದೊoದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.

ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ತಾಲೂಕಿಗೆ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ.

ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *