Breaking
24 Mar 2026, Tue

ಶ್ರೀ ಮೂಜಿಲ್ನಾಯ ದೈವಸ್ಥಾನದಲ್ಲಿ ವಾರ್ಷಿಕ ಮಹಾಪರ್ವ

ಉಪ್ಪಿರ: ಎಲಿಯನಡುಗೋಡು ಗ್ರಾಮದ ಉಪ್ಪಿರ ದೈವಸ್ಥಾನದಲ್ಲಿ ಶ್ರೀ ಕೊಡಮಣಿತ್ತಾಯ, ಮೂಜಿಲ್ನಾಯ ಹಾಗೂ ಪರಿವಾರ ದೈವಗಳಿಗೆ ವೈದಿಕ ವಿಧಾನಗಳೊಂದಿಗೆ ವಾರ್ಷಿಕ ಮಹಾಪರ್ವ ಮೇ 24ರಂದು ಶ್ರೀ ಕೃಷ್ಣಪ್ರಸಾದ್ ಅಸ್ರಣ್ಣರವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಮಹಾಪರ್ವದ ಅಂಗವಾಗಿ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವೂ ನಡೆಯಲಿದೆ.

ಎಲಿಯಮಾಗಣೆಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೈವಗಳ ಗಂಧ ಪ್ರಸಾದವನ್ನು ಸ್ವೀಕರಿಸಿ, ದೈವ ಕೃಪೆಗೆ ಪಾತ್ರರಾಗುವಂತೆ ಶ್ರೀ ಮೂಜಿಲ್ನಾಯ ದೈವಸ್ಥಾನ ವ್ಯವಸ್ಥಾಪನಾ ಸಮಿತಿ, ಎಲಿಯಮಾಗಣೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕೋರಿದ್ದಾರೆ.

Leave a Reply

Your email address will not be published. Required fields are marked *