ಮಂಗಳೂರು: ಮೇ. 27 ರಂದು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತುಳು ರಂಗಭೂಮಿ ಹಾಗೂ ಸಿನಿಮಾ ನಟ ನವೀನ್.ಡಿ.ಪಡೀಲ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.

ಚಿತ್ರ ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತಿ ಇರಲಿದೆ ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.


