ಹಾಸನ: ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಕಿಹಳ್ಳಿ ಎಂಬ ಗ್ರಾಮದಲ್ಲಿ ಮೆ.23 ರಂದು ನಡೆದಿದೆ.
ಗಜೇಂದ್ರಪುರ ಗ್ರಾಮದ ಚಂದ್ರಮ್ಮ(45) ಮೃತ ಮಹಿಳೆಯಾಗಿದ್ದಾರೆ.

ಡಾ.ಕರುಣ್ ಎಂಬುವರ ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುವಾಗ ಕಾಡಾನೆ ದಾಳಿ ಮಾಡಿದ್ದು ಸೊಂಡಿಲಿನಿಂದ ಬಿಸಾಕಿ, ಕಾಲಿನಿಂದ ತುಳಿದಿದೆ.ಈ ವೇಳೆ ಗಂಭೀರವಾಗಿ ಗಾಯಗೊಂಡ ಮಹಿಳೆ ಚಂದ್ರಮ್ಮ ಸಾವನ್ನಪ್ಪಿದ್ದಾರೆ.

ಬೇಲೂರು-ಸಕಲೇಶಪುರ ಭಾಗದಲ್ಲಿ ಕಾಡಾನೆ ದಾಳಿಯಿಂದ ಜನರು ಪ್ರಾಣ ಕಳೆದುಕೊಳ್ತಿರೋ ಪ್ರಕರಣಗಳು ಹೆಚ್ಚಾಗುತ್ತಿದ್ದು ಸ್ಥಳೀಯರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.


