Breaking
22 Jun 2025, Sun

ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಸಾವು

ಪುತ್ತೂರು: ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಮೇ 23 ರಂದು ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ.

ಮೃತಪಟ್ಟ ಮಹಿಳೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28) ಎಂದು ಗುರುತಿಸಲಾಗಿದೆ.

ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸುಮಾರು ಮೂರು ವಾರಗಳಿಂದ ಕಾಮಗಾರಿ ನಡೆಯುತ್ತಿದ್ದು, ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು.

ಸಂಜೆಯ ವೇಳೆಗೆ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿತ್ತು. ಆದರೆ ಸಂಜೆ ಕೆಲಸ ಮಾಡುತ್ತಿರುವ ವೇಳೆ ಕಾಂಕ್ರೀಟ್ ಮಿಕ್ಸಿಂಗ್‌ ಮಿಲ್ಲ‌ರ್ ವಾಹನ ಹಿಂದಕ್ಕೆ ಚಲಿಸುತ್ತಿದ್ದ ಸಂದರ್ಭದಲ್ಲಿ ಗೌರಮ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಎಸ್.ಐ.ಜಂಬೂರಾಜ್ ಮಹಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪತಿ ಬಸವರಾಜ ಅವರು ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತಿ ಬಸವರಾಜ, ಒಂದು ಹೆಣ್ಣು ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *