Breaking
24 Mar 2026, Tue

ಹೆಚ್ಚಾದ ಕೊರೊನಾ: ನಾಳೆಯಿಂದ ಟೆಸ್ಟ್ ಲ್ಯಾಬ್ ಪುನರಾರಂಭ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನಾಳೆಯಿಂದ(ಮೇ 25) ಕೋವಿಡ್ ಟೆಸ್ಟ್ ಪುನರಾರಂಭಿಸಲು ನಿರ್ಧರಿಸಿದೆ.

ರಾಜ್ಯದಲ್ಲಿ 35ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿಧಾ೯ರವನ್ನು ಕೈಗೊಂಡಿದ್ದು, ರಾಜ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.

ಈ ಮೂಲಕ ರಾಜ್ಯದಲ್ಲಿ ಮತ್ತೆ ಕೋವಿಡ್ ಟೆಸ್ಟ್ ಲ್ಯಾಬ್ ಓಪನ್ ಮಾಡಲು ಸಿದ್ಧತೆ ನಡೆಸಲಾಗಿದೆ.

Leave a Reply

Your email address will not be published. Required fields are marked *