Breaking
23 Mar 2026, Mon

ಮಂಗಳೂರಿನಲ್ಲಿ ಹೊತ್ತಿ ಉರಿದ ಕಾರು

ಮಂಗಳೂರು: ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಗರದ ಬಿಕರ್ನಕಟ್ಟೆಯ ಕೈಕಂಬ ಬಳಿಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರಿನ ಬೋನೆಟ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಎನ್ನಲಾಗಿದೆ.

ಈ ವೇಳೆ ಎಲ್ಲ ಪ್ರಯಾಣಿಕರು ಹೊರಬಂದಿದ್ದಾರೆ.

ಮಳೆಯ ನಡುವೆ ಕ್ಷಣಾರ್ಧದಲ್ಲಿ ಕಾರು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಕರಕಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ

Leave a Reply

Your email address will not be published. Required fields are marked *