Breaking
11 Aug 2025, Mon

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರಕಾರ ನಿಷ್ಪಕ್ಷಪಾತ ತನಿಖೆ ನಡೆಸಲು ಬಿಡುವುದಿಲ್ಲ- ಸಂಘಟಕ, ವಾಗ್ಮಿ ಶ್ರೀಕಾಂತ್ ಶೆಟ್ಟಿ ಪ್ರತಿಕ್ರಿಯೆ

ಮಂಗಳೂರು: ಹಿಂದೂ ಕಾರ್ಯಕರ್ತ ಸರಕಾರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರಕಾರ ನಿಷ್ಪಕ್ಷಪಾತ ತನಿಖೆ ನಡೆಸಲು ಬಿಡುವುದಿಲ್ಲ. ಹೀಗಾಗಿ ಎನ್ ಐಎ ಮೂಲಕ ತನಿಖೆ ನಡೆಸಬೇಕು” ಎಂದು ಸಂಘಟಕ, ವಾಗ್ಮಿ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಆಗ್ರಹಿಸಿ ನಗರದ ಬಜಪೆ ಜಂಕ್ಷನ್ನಲ್ಲಿರುವ ಶಾರದಾ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಭಾನುವಾರ ಹಮ್ಮಿಕೊಂಡಿದ್ದ ‘ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಮಾತನಾಡಿದರು. “ಸುಹಾಸ್ ಶೆಟ್ಟಿ ಬಲಿದಾನಕ್ಕೆ ಉತ್ತರವನ್ನು ಎಲ್ಲಿ? ಹೇಗೆ? ಮತ್ತು ಅದು ನಿಮ್ಮದೇ ರೀತಿಯ ಭಾಷೆಯಲ್ಲಿ ಕೊಡಬೇಕು ಎಂಬುದನ್ನು ಹಿಂದೂ ಸಮಾಜ ತೀರ್ಮಾನ ಮಾಡುತ್ತದೆ. ಕೇಂದ್ರ ತನಿಖಾ ತಂಡದಿAದ ತನಿಖೆಯಾದರೆ ಕೊಲೆಯ ಹಿಂದಿನ ಕಾಣದ ಕೈಗಳು ಯಾರು ಎಂದು ಗೊತ್ತಾಗಬಹುದು.

ಮತಾಂಧ ಶಕ್ತಿಗಳಿಗೆ ಹೆದರಿ ಕುಳಿತುಕೊಳ್ಳದೇ ತಕ್ಕ ಉತ್ತರ ಕೊಡುವ ಶಕ್ತಿ ಹಿಂದೂ ಸಮಾಜಕ್ಕೆ ಇದೆ. ನಿಮ್ಮ ಸಮಾಜಕ್ಕೆ ಎಷ್ಟು ರಕ್ತ ದಾಹವಿದೆ ಅದನ್ನು ತೀರಿಸಿ ಅದಕ್ಕಿಂತ ಒಂದು ತೊಟ್ಟು ಹೆಚ್ಚಾದರೂ ರಕ್ತವನ್ನು ಉಳಿಸಿಕೊಳ್ಳುವ ಶಕ್ತಿ ಹಿಂದೂ ಸಮಾಜಕ್ಕೆ ಇದೆ” ಗುಡುಗಿದರು.

ಇದೇ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೂಲ್ಕಿ-ಮೂಡಬಿದ್ರಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು , ಸುಹಾಸ್ ಶೆಟ್ಟಿ ಕೊಲೆಯಲ್ಲಿ ಪೊಲೀಸ್ ಇಲಾಖೆ ನೇರವಾಗಿ ಶಾಮೀಲಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿ ಹಾಗೂ ಓರ್ವ ರಾಜಕಾರಣಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದು,ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಿದಲ್ಲಿ ಇವರೆಲ್ಲರ ಹೆಸರು ಬಹಿರಂಗವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರತಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ವಿಶ್ವಹಿಂದೂ ಪರಿಷತ್ ಭಜರಂಗದಳದ ಮುಖಂಡರುಗಳು ಪಾಲ್ಗೊಂಡಿದ್ದರು.

ಈ ಸಂದರ್ಭ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಮುಖಂಡರುಗಳಾದ ಶಿವಾನಂದ ಮೆಂಡನ್, ಶರಣ್ ಪಂಪ್ವೆಲ್, ಜಗದೀಶ್ ಶೇಣವ, ಭುಜಂಗ ಕುಲಾಲ್, ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ನೆರೆದಿದ್ದು ಮುಂಜಾಗ್ರತಾ ಕೃಮವಾಗಿ ಬಜಪೆ ಪೇಟೆಯ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು.

Leave a Reply

Your email address will not be published. Required fields are marked *