Breaking
22 Mar 2026, Sun

ಬಿಜೆಪಿಯ 18 ಶಾಸಕರ ಅಮಾನತು ವಾಪಾಸ್: ಸ್ಪೀಕರ್ ಯು.ಟಿ ಖಾದರ್

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ನಿರ್ಧಾರವನ್ನು ಹಿಂಪಡೆಯಲು ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ನಿರ್ಧರಿಸಿದ್ದಾರೆ.

ಈ ವಿಚಾರಕ್ಕಡ ಸಂಬಂಧಪಟ್ಟಂತೆ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಇಂದು ಸಂಧಾನಸಭೆ ನಡೆಯಿತು.

ಈ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಶೋಕ್ ಸ್ಪೀಕರ್ ಅವರು ಹಜ್ ಯಾತ್ರೆಗೆ ಹೋಗಲಿದ್ದಾರೆ. ಅದ್ದರಿಂದ ಸೋಮವಾರ ಸ್ಪೀಕರ್ ಅಧಿಕಾರಿಗಳ ಸಭೆ ಕರೆದು ಆದೇಶ ಹೊರಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *