Breaking
22 Mar 2026, Sun

ಮುಂದುವರಿದ ಮಳೆಯಾರ್ಭಟ: ವಿಪತ್ತು ನಿರ್ವಹಣೆ ಕುರಿತು ಪ್ರಭಾರ ಜಿಲ್ಲಾಧಿಕಾರಿ ಡಾ| ಕೆ. ಆನಂದ್‌ ಅಧಿಕಾರಿಗಳೊಂದಿಗೆ ಸಭೆ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಪ್ರಭಾರ ಜಿಲ್ಲಾಧಿಕಾರಿ ಡಾ| ಕೆ. ಆನಂದ್‌ ಅವರು ಮೇ 25ರಂದು ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿದರು.

ಸಭೆಯಲ್ಲಿ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ದಳಗಳು ಜಿಲ್ಲೆಗೆ ಆಗಮಿಸಲಿದ್ದು, ರಾಷ್ಟ್ರೀಯ ವಿಪತ್ತು ದಳ (ಎನ್‌ಡಿಆರ್‌ಎಫ್)ದ ಒಂದು ತಂಡವು ಆಗಮಿಸಲಿದೆ. ಇದನ್ನು ಪುತ್ತೂರಿನಲ್ಲಿ ಇಡಲಾಗುವುದು.

ರಾಜ್ಯ ವಿಪತ್ತು ದಳ (ಎಸ್‌ಡಿಆರ್‌ಎಫ್) ದ ಎರಡು ತಂಡವು ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇರಲಿದೆ. ಈ ದಳಗಳು ಎಲ್ಲ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದ್ದು, ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಕಾರ್ಯಾಚರಿಸಲಿದೆ. ಎಸ್‌ಡಿಆರ್‌ಎಫ್ ತಂಡ ಈಗಾಗಲೆ ಆಗಮಿಸಿದೆ ಎಂದು ತಿಳಿಸಿದರು.

ಇದೇ ವೇಳೆ ಶಿಥಿಲಗೊಂಡಿರುವ ಅಂಗನವಾಡಿ ಮತ್ತು ಶಾಲಾ ಕೊಠಡಿಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಂದ ಕೆಲವು ಜನವಸತಿ ಪ್ರದೇಶಗಳಲ್ಲಿ ತೀವ್ರ ತೊಂದರೆಯಾಗಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *