ಪುತ್ತೂರು : ಖಾಸಗಿ ಬಸ್‌ವೊಂದು ಚರಂಡಿಗೆ ಬಿದ್ದು ಹಲವು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಪುತ್ತೂರಿನ ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಮೇ.26 ರಂದು ನಡೆದಿದೆ.
ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮಳೆ ಸುರಿಯುತ್ತಿದ್ದು , ಈ ಕಾರಣದಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ ಎಂದು ತಿಳಿದು ಬಂದಿದೆ.

ಈ ವೇಳೆ ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ.



