ಬಳ್ಳಾರಿ: ಮೈನಿಂಗ್ ಟಿಪ್ಪರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ಬಳ್ಳಾರಿಯ ಸಂಡೂರಿನ ಜೈಸಿಂಗಪುರ ಬಳಿ ಮೇ.26ರಂದು ನಡೆದಿದೆ.
ಈ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತರು ಸಂಡೂರು ತಾಲೂಕಿನ ಲಕ್ಷ್ಮೀಪುರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಕೊಪ್ಪಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಸಂಡೂರು ಪೊಲೀಸ್ ಠಾಣೆಯಲ್ಲಿ ಬಗ್ಗೆ ಪ್ರಕರಣ ದಾಖಲಾಗಿದೆ.


