Breaking
22 Mar 2026, Sun

ರೇಪ್ ಕೇಸ್ನಲ್ಲಿ ಜೈಲುಪಾಲಾದ ಹಾಸ್ಯ ನಟ ಮಡೆನೂರು ಮನು

ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಮಡೆನೂರು ಮನೂಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಸಹ ಕಲಾವಿದೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ನಟ ಮಡೆನೂರು ಮನುವನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದರು.

ಈ ನಿಟ್ಟಿನಲ್ಲಿ ಇಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು.

ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್ಗೆ ಹಾಜರು ಪಡಿಸಿದರು.

ವಾದ-ವಿವಾದಗಳನ್ನು ಆಲಿಸಿದ ಕೋರ್ಟ್ ಅಂತಿಮವಾಗಿ ಮನುವನ್ನು 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *