Breaking
21 Jun 2026, Sun

ಗೂನಡ್ಕದಲ್ಲಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾದ ಮನೆಗಳಿಗೆ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೊಳ್ಳೂರು ಭೇಟಿ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಭಾರೀ ಗಾಳಿ ಮಳೆಗೆ ಮನೆಗಳಿಗೆ ಮರ ಮುರಿದು ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ, ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು.

ಕೂಡಲೇ ಅಧಿಕಾರಿಗಳನ್ನು ಸಂಪರ್ಕಿಸಿ ಹಾನಿಗೊಳಗಾದ ಮನೆ ಮತ್ತು ನಿವಾಸಿಗಳಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.

ಈ ಸಂದರ್ಭ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ ಹಮೀದ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಹನೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್, ಸೂಡ ಅಧ್ಯಕ್ಷ ಕೆ.ಎಂ ಮುಸ್ತಫಾ, ಗ್ರಾಮ ಪಂಚಾಯತ್ ಸದಸ್ಯ ಅಬೂಸಾಲಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಕುಂಜಿ ಗೂನಡ್ಕ, ಕಾಂಗ್ರೆಸ್ ಮುಖಂಡ ಗೋಕುಲ್ ದಾಸ್ ಸುಳ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ, ಕಾಂಗ್ರೆಸ್ ಮುಖಂಡರಾದ ಇಕ್ಫಾಲ್ ಎಲಿಮಲೆ, ಉಬೈಸ್ ಗೂನಡ್ಕ, ಜುಬೈರ್ ಅರಂತೋಡು, ತಾಜುದ್ದೀನ್ ಅರಂತೋಡು, ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸಿದ್ದಿಕ್ ಕೊಕ್ಕೊ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *