Breaking
21 Sep 2026, Mon

ಉಕ್ಕಿ ಹರಿಯುತ್ತಿರುವ ಕುಮಾರಧಾರಾ ಸ್ನಾನ ಘಟ್ಟ: ಭಕ್ತರಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ

ಸುಬ್ರಹ್ಮಣ್ಯ: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ.

ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದೆ.

ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ದೇವಾಲಯದ ಆಡಳಿತ ಮಂಡಳಿ ಅನುಮತಿ ನೀಡಿದೆ.

ಇನ್ನು ಮುಂಜಾಗ್ರತಾ ಕ್ರಮವಾಗಿ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದೆ.

ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಪುತ್ತೂರಿಗೆ 25 ಮಂದಿ ಎನ್ಡಿಆರ್ಎಫ್ ಸಿಬ್ಬಂದಿ ಆಗಮಿಸಿದ್ದಾರೆ.

ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಜಿಲ್ಲಾಡಳಿತ ಸೂಚನೆ ನೀಡಿದೆ.

Leave a Reply

Your email address will not be published. Required fields are marked *