Breaking
6 Aug 2026, Thu

ಚರ್ಚ್ನಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾವು

ಉಡುಪಿ: ಮಹಿಳೆಯೊಬ್ಬರು ಚರ್ಚ್ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ನಲ್ಲಿ ಮೇ.25 ರಂದು ನಡೆದಿದೆ.

ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿಯಾಗಿರುವ ಶಾಂತಿ (52) ಎಂದು ಗುರುತಿಸಲಾಗಿದೆ.

ಭಾನುವಾರ ಶಾಂತಿ ಅವರು ಅಜ್ಜರಕಾಡಿನ ಚರ್ಚ್ ನನಲ್ಲಿ ಬೆಳಿಗ್ಗೆ 11:15 ರಿಂದ 11:30 ಗಂಟೆಯ ಮಧ್ಯಾವಧಿಯಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಹಠಾತ್ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ ಮೃತಪಟ್ಟಿದ್ದರು.

ಕಳೆದ ಐದು ವರ್ಷಗಳಿಂದ ಶಾಂತಿಯವರು ಥೈರಾಡ್ ಮತ್ತು ಗರ್ಭಕೋಶ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಯನ್ನು ಪಡೆಯುತ್ತಿದ್ದರು.

ಈ ಖಾಯಿಲೆಗಳು ಉಲ್ಬಣಗೊಂಡು ತಾಯಿ ಮೃತಪಟ್ಟಿರಬಹುದು ಎಂದು ಅವರ ಪುತ್ರಿ ಉಡುಪಿ ನಗರ ಪೊಲೀಸ್ ಠಾಣೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *