ಬಂಟ್ವಾಳ: ಎಡೆ ಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆಯ ಜೊತೆಗೆ ಬೀಸುತ್ತಿರುವ ಜೋರಾದ ಗಾಳಿಗೆ ಬಂಟ್ವಾಳ – ಮಂಜೇಶ್ವರ ಗಡಿ ಪ್ರದೇಶವಾದ ಆನೇಕಲ್ಲು ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.
ಇದರಿಂದ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮರ ತೆರವು ಕಾರ್ಯಾಚರಣೆ ಮುಂದುವರಿದಿದೆ.







