Breaking
21 Mar 2026, Sat

ಮಳೆಯ ಅಬ್ಬರ ಹಿನ್ನಲೆ ದ.ಕ ಜಿಲ್ಲೆಯ ಶಾಲೆಗಳಿಗೆ ಮೇ. 27 ಮತ್ತು 28 ರಜೆ ,ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿಗೆ ಮಾತ್ರ ರಜೆ

ಮಂಗಳೂರು/ಉಡುಪಿ ಜಿಲ್ಲೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಹಲವು ಅನಾಹುತಗಳನ್ನು ಉಂಟು ಮಾಡಿದೆ.

ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಹೀಗಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮೇ. 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಮಾತ್ರವಲ್ಲ ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ ನೀಡಿದ್ದಾರೆ.ಇನ್ನು ಇತ್ತ ಉಡುಪಿ ಜಿಲ್ಲೆಯಲ್ಲಿಯೂ ಕಳೆದ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 27 ರಂದು ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *