ಉಡುಪಿ : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಜಿಲ್ಲೆಯ ಕಾಪು ಸಮೀಪದ ಪೊಲಿಪು ಮಸೀದಿ ಬಳಿ ಮೇ.26 ರ ಸಂಜೆಯ ವೇಳೆ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಕೆಎಸ್ಆರ್ಟಿಸಿ ಬಸ್ ನ್ನು ಓವರ್ ಟೆಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ನಾಲ್ವರಿಗೆ ಗಂಭೀರ ಪ್ರಮಾಣದ ಹಾಗೂ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಗಾಯಾಳುಗಳನ್ನು ಉಡುಪಿ ಹಾಗೂ ಕಾಪುವಿನ ಆಸ್ಪತ್ರೆಗೆ ದಾಖಲಿಸಲಾಗಿದೆ.



