Breaking
21 Sep 2026, Mon

ಓವರ್ ಟೇಕ್: ಕೆ.ಎಸ್‌‌.ಆರ್‌ ಟಿ.ಸಿ ಬಸ್ ಬೈಕಿಗೆ ಡಿಕ್ಕಿ: ಯುವಕ ಸಾವು

ಕಡಬ: ಕೆ.ಎಸ್‌‌.ಆರ್‌.ಟಿ.ಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮೇ 26 ರಂದು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ.

ಬಿಶ್ವಜಿತ್ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದು, ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆ.ಎಸ್. ಆರ್. ಟಿ‌. ಸಿ ಬಸ್ ಒಮ್ನಿ ಕಾರೊಂದನ್ನು ಓವರ್‌ ಟೇಕ್ ಮಾಡುವ ಭರದಲ್ಲಿ ಬಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಇದೇ ವೇಳೆ ಒಮ್ನಿ‌ ಕಾರಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಗಾಯಾಳು ಯುವಕನನ್ನು ತಕ್ಷಣ ಕಡಬ ಆಸ್ಪತ್ರೆಗೆ ಸಾಗಿಸಲಾಗಿದ್ದರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಯುವಕ ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾನೆ.

Leave a Reply

Your email address will not be published. Required fields are marked *