Breaking
21 Sep 2026, Mon

ಬೆಳ್ಳಂಬೆಳಗ್ಗೆ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಸಾವು

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು, ಚಾಲಕ ಮೃತಪಟ್ಟ ಘಟನೆ ಇಂದು (ಮೇ.27ರಂದು) ಮುಂಜಾನೆ ಬಿ.ಸಿ. ರೋಡ್‌ ಬಳಿ ನಡೆದಿದೆ.

ಮೃತ ವ್ಯಕ್ತಿ ಮಂಚಿ ಭಂಡಾರಕೊಟ್ಟಿಗೆ ನಿವಾಸಿ, ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್‌ ಸಿಬ್ಬಂದಿ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಿದ್ಯುತ್‌ ಕಂಬಕ್ಕೂ ಹಾನಿಯಾಗಿದೆ.

ಬಂಟ್ವಾಳ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *