ಕೊಡಗು: ಗಾಳಿ ಸಹಿತ ಭಾರೀ ಮಳೆಗೆ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕೊಡಗಿನ ಅಮ್ಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲೋನಿಯಲ್ಲಿ ಮೇ.27 ರಂದು ನಡೆದಿದೆ.
ಸ್ಥಳೀಯ ನಿವಾಸಿ ಪಿ.ಸಿ.ವಿಷ್ಣು ಬೆಳ್ಳಿಯಪ್ಪ (65) ಎಂಬುವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಇಂದು ಬೆಳಿಗ್ಗೆ 7.30 ಗಂಟೆ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪ ಅವರ ಮೇಲೆ ಮಾವಿನ ಮರ ಬಿದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



