Breaking
23 Mar 2026, Mon

ಕೆಸರು ಮಯವಾದ ಬೆಳಾಲು ಮಾಯ ಪರಿಸರದ ರಸ್ತೆ: ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

ಬೆಳಾಲು: ವಿಪರೀತವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಬೆಳಾಲು ಮಾಯ ಪ್ರದೇಶ ರಸ್ತೆಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಸಂಚರಿಸಲು ಕಷ್ಟ ಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ನಿಟ್ಟಿನಲ್ಲಿ ಗ್ರಾಮಸ್ಥರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಗ್ರಾಮ ಪಂಚಾಯತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 2 ವರ್ಷಗಳಿಂದ ಮಳೆಗಾಲದಲ್ಲಿ ಗ್ರಾಮಸ್ಥರು ಈ ರಸ್ತೆಯ ಸಮಸ್ಯೆ ಎದುರಿಸುತ್ತಿದ್ದು ಶಾಲಾ ಮಕ್ಕಳು, ಮತ್ತು ವಾಹನ ಸವಾರರು ಸಂಚರಿಸಲು ಸಮಸ್ಯೆ ಉಂಟಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳು ಇಲ್ಲಿ ತಾಂಡವಾಡುತಿದ್ರೂ, ಬೆಳಾಲ್ ಗ್ರಾಮ ಪಂಚಾಯತ್ ಇನ್ನೂ ಕೂಡ ಎಚ್ಚೆತ್ತುಕೊಳ್ಳದೆ ಇರುವುದು ವಿಪರ್ಯಾಸವೇ ಸರಿ.

Leave a Reply

Your email address will not be published. Required fields are marked *