Breaking
19 Sep 2026, Sat

ಪಕ್ಷವಿರೋಧಿ ಚಟುವಟಿಕೆ ಆರೋಪ- ಬಿಜೆಪಿಯಿಂದ ಎಸ್ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ 6ವರ್ಷಗಳ ಕಾಲ ಉಚ್ಚಾಟನೆ

ಬೆಂಗಳೂರು: ಪಕ್ಷವಿರೋಧಿ ಚಟುವಟಿಕೆ ಆರೋಪದ ಹಿನ್ನಲೆ ಭಾರತೀಯ ಜನತಾ ಪಕ್ಷ ನಾಯಕರಾಗಿದ್ದ ಎಸ್ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಈ ಇಬ್ಬರು ನಾಯಕರು ಈ ಹಿಂದೆ ಬಿಜೆಪಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಮಾತನಾಡುತ್ತಿದ್ದ ಮತ್ತು ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಳ್ಳುತ್ತಿದ್ದರು.

ಹೀಗಾಗಿ ಮುಂದಿನ 6ವರ್ಷಗಳ ಕಾಲ ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಅನ್ನುವ ಮಾಹಿತಿಲಭ್ಯವಾಗಿದೆ.

ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ ಅಂತ ಹೇಳಿದ್ದರು.

ಅದರಂತೆ ಇಂದು ರಾಜ್ಯದ ಈ ಇಬ್ಬರು ಬಿಜೆಪಿ ನಾಯಕರನ್ನು ಕೇಂದ್ರ ಸಮಿತಿ ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ.

Leave a Reply

Your email address will not be published. Required fields are marked *