Breaking
19 Sep 2026, Sat

ಆಸ್ಪತ್ರೆಯಲ್ಲಿ ಮುಸ್ಲಿಂ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಯುವಕರು

ಮಂಗಳೂರು: ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹ್ಮಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂರ್ವ ಗಾಯಾಳು ಖಲಂದರ್ ಶಾಫಿಗೆ ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಈ ವೇಳೆ ಘಟನೆ ನಡೆದ ತಕ್ಷಣ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯ ಆರೋಗ್ಯ ವಿಚಾರಿಸಲು ಬಂದ ಮುಸ್ಲಿಂ ಮುಖಂಡರು ಬಂದಿದ್ದು,ಯುವಕರು ಅಡ್ಡ ಗಟ್ಟಿ ತರಾಟೆಗೆ ತೆಗೆದುಕೊಂಡಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದು ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ.

ಮೊನ್ನೆ ನಡೆದ ಹಿಂದೂ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧ ಕ್ರಮ ಜಿಲ್ಲಾ ಆಡಳಿತ ಕೈಗೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ.

ಸಮುದಾಯಕ್ಕೆ ನಿಮ್ಮ ನಾಯಕತ್ವದ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *