Breaking
25 Jul 2026, Sat

ಬಂಟ್ವಾಳದಲ್ಲಿ ಯುವಕನ ಬರ್ಬರ ಕೊಲೆ – ಸೂಕ್ತ ಕಾನೂನು ಕ್ರಮಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬಂಟ್ವಾಳ: ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವರು ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಖಂಡನೀಯ.

ಘಟನೆ ಹಿನ್ನೆಲೆಯಲ್ಲಿ ನಾನು ಡಿಜಿ ಮತ್ತು ಐಜಿಪಿ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅಪರಾಧಿಗಳನ್ನು ಪತ್ತೆಹಚ್ವಿ, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಅಲ್ಲದೇ ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೂ ಮಾತನಾಡಿ, ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದೇನೆ.

ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *