Breaking
19 Sep 2026, Sat

ರಹಿಮಾನ್ ಹತ್ಯೆ: ಕಾಂಗ್ರೆಸ್ ನಾಯಕರ ರಾಜೀನಾಮೆಗೆ ಮುಸ್ಲಿಂ ಮುಖಂಡರ ಆಗ್ರಹ

ಮಂಗಳೂರು: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ.

ಮಾತ್ರವಲ್ಲ ಮಾಧ್ಯಮಗಳ ಮೂಲಕ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸಾಮೂಹಿಕ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *