Breaking
25 Jul 2026, Sat

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಕಾಂಗ್ರೆಸ್ ಅಧೀನದ ವಿವಿಧ ಘಟಕಗಳಿಗೆ ಪುತ್ತೂರಿನ ಮುಸ್ಲಿಂ ಮುಖಂಡರು ರಾಜೀನಾಮೆ

ಪುತ್ತೂರು: ಬಂಟ್ವಾಳದ ಕೊಳತ್ತಮಜಲುವಿನ ಯುವಕ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ದೋರಣೆ ಖಂಡಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮುಸ್ಲಿಂ ಮುಖಂಡರು ಕಾಂಗ್ರೆಸ್ ಅಧೀನದ ವಿವಿಧ ಘಟಕಗಳಿಗೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಬಾತಿಶ್ ಅಳಕೆಮಜಲು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಉಬೈದುಲ್ಲಾ ಕೊಳಕೆ, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಮದ್ ವಿಟ್ಲ, ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಮೀರ್, NSUI ಬೆಳ್ತಂಗಡಿ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಮಾನ್ ಫಾರೀಶ್.

ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನ್ಸಾಫ್ ಕರಾಯ, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಉನೈಸ್ ಗಡಿಯಾರ ಸಹಿತ ಕಾಂಗ್ರೆಸ್ ನ ವಿವಿಧ ಘಟಕಗಳ ವಿವಿಧ ಹುದ್ದೆಗಳಿಗೆ ಮುಸ್ಲಿಂ ನಾಯಕರು ರಾಜೀನಾಮೆ ನೀಡಿದ್ದಾರೆ.

ಈಗಾಗಲೇ ಸರಿ ಸುಮಾರು ಹತ್ತರಷ್ಟು ನಾಯಕರು ರಾಜೀನಾಮೆ ನೀಡಿದ್ದು ಈ ರಾಜೀನಾಮೆಯ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಅಂತ ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *