Breaking
25 Jul 2026, Sat

ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ- ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಂಟ್ವಾಳದಲ್ಲಿ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲವಿನ ನಿವಾಸಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿರುವ ಅವರು ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು ತೀರಾ ಖಂಡನೀಯ.

ಪೋಲಿಸ್ ಇಲಾಖೆ ಇಂತಹ ವಿಚಾರಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೋಮು ದ್ವೇಷಕ್ಕೆ ಯಾವ ಧರ್ಮದವನು ಬಲಿಯಾಗಬಾರದು. ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ಎಂದಿದ್ದಾರೆ.

Leave a Reply

Your email address will not be published. Required fields are marked *