ಚಿಕ್ಕಮಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ಪರಾರಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿ ಕೀರ್ತಿ (26) ಮೃತ ದುರ್ದೈವಿಯಾಗಿದ್ದು, ಆರೋಪಿ ಪತಿ ಅವಿನಾಶ್ ಎಂಬಾತನನ್ನು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಲಾಗಿದೆ.ಕಳೆದ ನಾಲ್ಕು ವರ್ಷಗಳ ಹಿಂದೆ ಕೀರ್ತಿ ಮತ್ತು ಅವಿನಾಶ್ ಇಬ್ಬರು ಕೂಡ ಪ್ರೀತಿಸಿ ಮದುವೆಯಾಗಿದ್ದರು.
ಮೇ.28 ರಂದು ಗಂಡ, ಹೆಂಡತಿಯ ನಡುವೆ ಯಾವುದೋ ಒಂದು ಕಾರಣಕ್ಕೆ ಜಗಳವಾಗಿದೆ. ಈ ಜಗಳ ತಾರಕಕ್ಕೇರಿ ಕೋಪದಲ್ಲಿ ನಿಯಂತ್ರಣ ಕಳೆದುಕೊಂಡ ಗಂಡ ಅವಿನಾಶ್ ಪತ್ನಿ ಕೀರ್ತಿಯನ್ನು ಮನಸ್ಸೋ ಇಚ್ಛೆ 10 ಬಾರಿ ಚಾಕುವಿನಲ್ಲಿ ಚುಚ್ಚಿ ಕೊಲೆ ಮಾಡಿದ್ದಾನೆ.

ಆ ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

