ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉದ್ಯಮಿ, ಸಮಾಜ ಸೇವಕ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲೀಕರಾಗಿರುವ ಕೆ.ಮೋಹನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಉದ್ಯಮಿ ಮೋಹನ್ ಅವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಸಮಾಜ ಸೇವಕರಾಗಿ ಮತ್ತು ಹತ್ತು ಹಲವು ವಿಭಿನ್ನ ಕಾರ್ಯಕ್ರಮಗಳ ಮೂಲಕ ಈ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಮಾತ್ರವಲ್ಲ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡುವ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ.

ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಮೋಹನ್ ಅವರ ಕಾರ್ಯಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ.ಇವರ ಈ ಸಮಾಜ ಸೇವೆ, ಸಂಘಟನಾತ್ಮಕ ಶಕ್ತಿಯನ್ನು ಗುರುತಿಸಿ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟ್ ಗೆ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದೆ.

ಈ ನಿಟ್ಟಿನಲ್ಲಿ ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್ ನ 10ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದ್ದಾರೆ.
