Breaking
22 Mar 2026, Sun

ಕಾರ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ವಾಲಿದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ಕಾರ್ಕಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ವಾಲಿದ ಘಟನೆ ಆನೆಕೆರೆ ದಾನಶಾಲೆ ರಸ್ತೆಯಲ್ಲಿ ಮೇ 29ರಂದು ನಡೆದಿದೆ.

ಕಾರು ಕೊಲ್ಲಾಪುರ ಮೂಲದಾಗಿದ್ದು ಹುಂಬುಚ್ಚದಲ್ಲಿ ಜೈನ ಪವಿತ್ರ ತೀರ್ಥಕ್ಷೇತ್ರಗಳ ದರ್ಶನ ಪಡೆದು ಕಾರ್ಕಳದ ಜೈನ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲೆಂದು ಆಗಮಿಸಿತ್ತು. ಈ ವೇಳೆ ಆನೆಕೆರೆಯಿಂದ ದಾನಶಾಲೆಯತ್ತ ಸಾಗುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ವಾಲಿದೆ ಎಂದು ತಿಳಿದು ಬಂದಿದೆ.

ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ.

ಕಾರ್ಕಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *