Breaking
22 Mar 2026, Sun

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣ: ಬಿ.ಕೆ ಹರಿಪ್ರಸಾದ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ಇಂದು ಸದಾಶಿವ ನಗರದಲ್ಲಿ ಇರುವ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳು ಹರಿ ಪ್ರಸಾದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ವಾಸ್ತವ ಪರಿಸ್ಥಿತಿಯನ್ನು ಪರಿಶೀಲನೆ ನಡೆಸುವ ಹೊಸ ಜವಾಬ್ದಾರಿ ನೀಡಿದ್ದಾರೆ.

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ.

ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದೆ ಎಂದರು.

ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ ಅಂತ ಹೇಳಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಮತ್ತಷ್ಟು ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ.

Leave a Reply

Your email address will not be published. Required fields are marked *