ಬಂಟ್ವಾಳ : ಹಿಂದೂ ಸಂಘಟನೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ.
ಆರ್ ಎಸ್ ಎಸ್ ಬಂಟ್ವಾಳ ತಾಲೂಕು ಕಾರ್ಯವಾಹ ರಕ್ಷಿತ್ ಬುಡೋಲಿ ಅವರಿಗೆ ಈ ಬೆದರಿಕೆ ಬಂದಿದ್ದು, ಬೆದರಿಕೆ ಆಡಿಯೋದಲ್ಲಿ ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ, ನಿನ್ನ ಸ್ನೇಹಿತ ನರಸಿಂಹ ಮಾಣಿ ಯ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ, ಅವನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ, ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದುಹಾಕಿದ್ದಾರೆ. ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ, ಮೊದಲು ಆತನ ಕೈಕಾಲ ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ.
ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ, ನಿನ್ನನ್ನು(ನರಸಿಂಹ ಮಾಣಿ )ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗೆ ಗೊತ್ತಿಲ್ಲ, ನಿನ್ನ ಕೊಂದ ರೀತಿಯನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು, ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಮುಗಿಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.
ಈ ಕುರಿತಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.



