Breaking
6 Aug 2026, Thu

ಉಗ್ರ ಬೆದರಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಹರಿಪ್ರಸಾದ್ ಯಾದವ್

ಪುತ್ತೂರು: ಜೈಶೆ ಮೊಹಮ್ಮದ್ ಹೆಸರಿನ ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕವಿರುವ ಕರಾವಳಿಯ ಸ್ವೀಪರ್ ಸೆಲ್ ಗಳನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಬೇಕು ಮತ್ತು ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಹೇಳಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಕ್ಷಿತ್ ಬುಡೋಳಿಯವರಿಗೆ ಪಾಕಿಸ್ಥಾನದಲ್ಲಿ ಸಕ್ರೀಯವಾಗಿರುವ ಜೈಶೆ ಮೊಹಮ್ಮದ್ ಉಗ್ರವಾದಿ ಸಂಘಟನೆಯ ಹೆಸರಿನಲ್ಲಿ ಬೆದರಿಕೆ ಬಂದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಉಗ್ರವಾದಿ ಸಂಘಟನೆಯ ಹೆಸರಿನಲ್ಲಿ ಬೆದರಿಕೆ ಬಂದಿರುವ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು.

ಆಡಳಿತ ನಡೆಸುವ ಸರಕಾರ ಇಂತಹ ವಿಷಯದಲ್ಲಿ ಮೌನವಹಿಸಿದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಸಮಾಜಘಾತುಕ ವ್ಯಕ್ತಿಗಳನ್ನು ಹೆಡೆಮುರಿಕಟ್ಟುವ ಪೊಲೀಸ್ ಅಧಿಕಾರಿಗಳು ಜಿಲ್ಲೆಯಲ್ಲಿ ಇದ್ದಾರೆ ಎನ್ನುವ ವಿಶ್ವಾಸ ಹಿಂದೂ ಸಮಾಜಕ್ಕೆ ಇದೆ.

ನರಸಿಂಹ ಮಾಣಿಯವರಂತ ಕಾರ್ಯಕರ್ತರು ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂದು ರಾಷ್ಟ್ರ ರಕ್ಷಣೆ,ಧರ್ಮರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆಗಳನ್ನು ಹಾಕಿದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

Leave a Reply

Your email address will not be published. Required fields are marked *