Breaking
20 Jun 2026, Sat

ಕೊಳತ್ತಮಜಲಿನಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಮನೆ ದ.ಕ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬಂಟ್ವಾಳ: ಅಬ್ದುಲ್ ರಹೀಂ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಬ್ದುಲ್ ರಹೀಂ ಅವರಿಗೆ ಯಾರ ಜೊತೆನೂ ದ್ವೇಷ ಇರಲಿಲ್ಲ.

ರಹೀಂ ಅಂತ್ಯ ಕ್ರಿಯೆಗೆ ಎಲ್ಲಾ ಸಮಾಜದವರೂ ಬಂದಿದ್ದರು. ಈ ಕೃತ್ಯದ ಹಿಂದಿರುವ ದುಷ್ಟ ಶಕ್ತಿಗಳನ್ನೂ ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳಲಾಗುವುದು.

ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕಾನೂನು ಕ್ರಮ ಕಟ್ಟುನಿಟ್ಟಾಗಿ ಆಗುತ್ತಿದೆ, ಕುಟುಂಬಕ್ಕೆ ನ್ಯಾಯ ಕೊಡಿಸ್ತೇವೆ ಎಂದರು.

ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ಎಂಎಲ್ ಸಿ ಐವನ್ ಡಿಸೋಜಾ, ಮೊಹಮ್ಮದ್ ಮೋನು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *