Breaking
19 Sep 2026, Sat

2026 ಫೆಬ್ರವರಿ 18 ರಿಂದ 22ರವರೆಗೆ ಶ್ರೀ ಮಹಾದೇವದೇವೇಶ್ವರ ದೇವಸ್ಥಾನ ಕಜೆಕಾರು ಬ್ರಹ್ಮಕಲಶೋತ್ಸವ

ಬಂಟ್ವಾಳ: ತೆಂಕಕಜೆಕಾರು ಗ್ರಾಮದ ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು 2026 ಫೆ. 18 ರಿಂದ 22 ರವರೆಗೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಗುಣಶೇಖರ ಕೊಡಂಗೆ ತಿಳಿಸಿದರು.

ಜೂ.01ರಂದು ಕ್ಷೇತ್ರದಲ್ಲಿ ನಡೆಸಿದ ವಿಶೇಷ ಸಭೆಯಲ್ಲಿ ಬ್ರಹ್ಮಕಲಶೋತ್ಸವದ ಬಗ್ಗೆ ಚರ್ಚೆ ನಡೆದಿದ್ದು ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹಾಗೂ ಸಮಿತಿಗಳ ಬಗ್ಗೆ ವಿಚಾರ ವಿನಿಮಯ ಮಾಡಲಾಯಿತು.

ಸಭೆಯಲ್ಲಿ ಊರಿನ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *