Breaking
22 Mar 2026, Sun

ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಆರೋಪ-ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್

ಬಂಟ್ವಾಳ : ಮೇ 1ರಂದು ಬಜ್ಪೆಯಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣಮಾಡಿದ ಆರೋಪದಲ್ಲಿ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ.



ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12ರಂದು ಸುಹಾಸ್_ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಕಲ್ಲಡ್ಕ ಭಟ್ ಪ್ರಚೋದನಾತ್ಮಕ ಭಾಷಣ ಮಾಡಿದ್ದರೆಂದು ಆರೋಪಿಸಲಾಗಿದೆ.




ಈ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂ.1 ರಂದು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *