ಮಂಗಳೂರು: ಅಪಾರ್ಟ್‌ಮೆಂಟ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಜೂನ್ 02ರಂದು ಬೆಳಿಗ್ಗೆ ನಡೆದಿದೆ.

ಅಪಾರ್ಟ್‌ಮೆಂಟ್ ನ ಎರಡನೇ ಮಹಡಿಯ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ಠಾಣೆ ಅಧಿಕಾರಿ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಮನೆಯಲ್ಲಿದ್ದ ಸೋಫಾ, ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಅದೇ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ಹೀಟರ್ ಬಳಕೆ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
