Breaking
27 Jul 2025, Sun

ಫೇಸ್ ಬುಕ್ ಪೇಜ್ ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್: ವಿಟ್ಲ ಯತೀಶ್ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಫೇಸ್ ಬುಕ್ ಪೇಜ್ ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಮಾಡಿದ್ದ ಯುವಕನೊಬ್ಬನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಯತೀಶ್ ಎಂಬ ಯುವಕ ತನ್ನ “ಯತೀಶ್ ಪೆರುವಾಯಿ” ಪೇಜ್ ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *