Breaking
6 May 2026, Wed

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಪೊಲೀಸ್ ಇಲಾಖೆಯ ನಡೆಯಿಂದ ಬೇಸತ್ತ ಹಿಂದೂ ಕಾರ್ಯಕರ್ತರು

ಮಂಗಳೂರು : ಬಂಟ್ವಾಳ ತಾಲೂಕಿನ ಇರಕೋಡಿಯಲ್ಲಿ ಮೇ.27 ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ದುಷ್ಕರ್ಮಿಗಳಿಂದ ಕೊಲೆ ಯತ್ನಕ್ಕೀಡಾಗಿದ್ದ ಕಲಂದರ್ ಶಾಫಿ ಪ್ರಕರಣದಲ್ಲಿ ಹಿಂದೂ ಸಂಘಟನೆಯ 15 ಮಂದಿ ಕಾರ್ಯಕರ್ತರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂ ಕಾರ್ಯಕರ್ತರಾದ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್ ಮತ್ತು ಇತರೆ ಮೂವರ ಮೇಲೆ ಎಫ್ಐಆರ್ ದಾಖಲಾಗಿದೆ.

ಈ ನಿಟ್ಟಿನಲ್ಲಿ ನೂತನ ಎಸ್ಪಿ ರಾತ್ರೋರಾತ್ರಿ ಹಿಂದೂ ಸಂಘಟನೆ ಮುಖಂಡರ ಮನೆಗಳಿಗೆ ಭೇಟಿ ನೀಡುತ್ತಿದ್ದು, ಮಧ್ಯರಾತ್ರಿ ಪೊಲೀಸರು ಮನೆಗೆ ಆಗಮನಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಪೊಲೀಸರ ಈ ನಡೆಯಿಂದ ಬೇಸತ್ತ ಹಿಂದೂ ಕಾರ್ಯಕರ್ತರು ಠಾಣೆ ಎದುರು ಹಾಜರಾಗಿದ್ದಕ್ಕೆ ಎಫ್ಐಆರ್ ದಾಖಲು ಮಾಡಲಾಗಿದೆ.

ಯಾವುದೇ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ವಿಹೆಚ್ಪಿ ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ರೈ ಹೇಳಿಕೆ ನೀಡಿದ್ದು, ರಾತ್ರಿ ವೇಳೆ ಮನೆಗಳಿಗೆ ದಿಢೀರ್ ಭೇಟಿ ನೀಡಿ ಅಪರಾಧಿಗಳಂತೆ ಬಿಂಬಿಸುತ್ತಿದ್ದು, ಇದರಿಂದ ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ಸೃಷ್ಟಿ ಉಂಟಾಗಿದೆ.

ಇದು ಹೀಗೆ ಮುಂದುವರಿದರೆ ಹೋರಾಟ ಅನಿವಾರ್ಯ ಎನ್ನುವ ಎಚ್ಚರಿಕೆಯನ್ನು ರವಾನಿಸಿದ್ದಾರೆ.

Leave a Reply

Your email address will not be published. Required fields are marked *