Breaking
6 May 2026, Wed

ಚಿಕ್ಕಮಗಳೂರಿನಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಮನೆ,ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

ಚಿಕ್ಕಮಗಳೂರು: ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಮನೆ ಹಾಗೂ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಜೂನ್.2 ರಂದು ಬೆಳಗ್ಗೆ ನಡೆದಿದೆ.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜು ಅವರ ಮನೆಯ ಮುಂದಿದ್ದ ಹೂವಿನ ಕುಂಡಗಳನ್ನು ಒಡೆದು ಹಾಕಿದ ಕಿಡಿಗೇಡಿಗಳು ಇನ್ನೋವಾ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.

ಬಳಿಕ ಕಾರಿನ ಬಾನೆಟ್, ಬಂಪರ್ ಒಡೆದು ಹಾಕಿ ಪರಾರಿಯಾಗಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *