ಪುತ್ತೂರು: ಬಿಜೆಪಿ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ವಿಚಾರಣೆಗೆ ದಿನ ನಿಗಧಿಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್.1 ರಂದು ಕಂದಾಯ ಇಲಾಖೆಯ ಆಯುಕ್ತರು ವಿಚಾರಣೆಗೆ ದಿನಾಂಕ ನಿಗದಿಪಡಿಸಿದ್ದು ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಸ್ವತಃ ಅರುಣ್ ಕುಮಾರ್ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ.

ಒಂದು ವೇಳೆ ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದಿದ್ದರೇ, ಅವರಿಗೆ ಈ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೇಂದು ಭಾವಿಸಿ. ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ಮಾಹಿತಿ ನೀಡಿದ್ದಾರೆ.



