ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವು ಜೂನ್.2 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾಗಿರುವ ಹರೀಶ್ ಪೂಂಜ ಅವರು ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.
ಈ ಸಂದರ್ಭ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ, ಮುಖ್ಯ ಶಿಕ್ಷಕರಾದ ಚಂದ್ರಾವತಿ, ಪೋಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


