ಸೌದಿ ಅರೇಬಿಯಾ: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ರವಿವಾರ ಮಧ್ಯರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಶಾದಲ್ಲಿ ನಡೆದಿದೆ.
ಟ್ಯಾಕ್ಸಿ ಚಾಲಕ ಬಷೀರ್ (41) ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ.
ಕಳೆದ 13 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಬಷೀರ್ ಅವರು ಮೊದಲಿಗೆ ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು.

ಇತ್ತೀಚೆಗೆ ಬಿಶಾದಲ್ಲಿ ಟ್ಯಾಕ್ಸಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ತಮ್ಮ ನಿವಾಸದ ಬಳಿ ವಾಹನವನ್ನು ಸ್ವಚ್ಛಗೊಳಿಸುವ ವೇಳೆ ದಾಳಿಗೊಳಗಾಗಿದ್ದಾರೆ.
ಬಿಶಾದಿಂದ 35 ಕಿಲೋಮೀಟರ್ ದೂರದ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪರಿಚಿತ ದಾಳಿಕೋರರು ವಾಹನದಲ್ಲಿ ಬಂದು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಬಷೀರ್ ಅವರನ್ನು ಕಾರಿನೊಳಗೆ ರಕ್ತದ ಮಡುವಿನಲ್ಲಿ ಕಂಡಿದ್ದಾರೆ.
ಈಜಿಪ್ಟ್ನ ನಾಗರಿಕರೊಬ್ಬರು ತಕ್ಷಣ ಬಷೀರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಆಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಸ್ಥಳೀಯ ಪೊಲೀಸರು ತನಿಖೆ ತನಿಖೆ ಮುಂದುವರೆಸಿದ್ದಾರೆ.
